🌸🌸🌸🌸🌸🌸
*ಮಕರ ಸಂಕ್ರಾಂತಿ*
🌸🌸🌸🌸🌸🌸🌸ಅ. *ತಿಥಿ : ಈ ಹಬ್ಬವು ತಿಥಿವಾಚಕವಾಗಿರದೇ ಅಯನ-ವಾಚಕವಾಗಿದೆ.* ಈ ದಿನ ಸೂರ್ಯನ ನಿರಯನ *ಮಕರ ರಾಶಿ ಯಲ್ಲಿ ಸಂಕ್ರಮಣವಾಗುತ್ತದೆ.*
ಸೂರ್ಯನ ಭ್ರಮಣದಿಂದಾಗುವ ಕಾಲ *ವ್ಯತ್ಯಾಸವನ್ನು ಸರಿ ಪಡಿಸಲು ಪ್ರತಿ 80 ವರ್ಷಕ್ಕೊಮ್ಮೆ ಸಂಕ್ರಾಂತಿಯನ್ನು ಒಂದು ದಿನ ಮುಂದೂಡಲಾಗುತ್ತದೆ.*
ಆ. *ಇತಿಹಾಸ:* ಸಂಕ್ರಾಂತಿಯನ್ನು ದೇವತೆ ಎಂದು ನಂಬಲಾಗಿದೆ. *ಸಂಕ್ರಾಂತಿಯು ಸಂಕರಾಸುರನೆಂಬ* ದೈತ್ಯನ ವಧೆ ಮಾಡಿದ್ದಾಳೆ ಎಂಬ ಕಥೆಯಿದೆ.
ಇ. *ಸಂಕ್ರಾಂತಿಯ ಬಗ್ಗೆ ಪಂಚಾಂಗದಲ್ಲಿ ಇರುವ ಮಾಹಿತಿ:* ಪಂಚಾಂಗದಲ್ಲಿ ಸಂಕ್ರಾಂತಿಯ ರೂಪ, ವಯಸ್ಸು, ವಸ್ತ್ರ, ಹೋಗುವ ದಿಕ್ಕು ಮುಂತಾದವುಗಳ ಮಾಹಿತಿ ಇರುತ್ತದೆ.
ಅದು ಕಾಲಮಹಿಮೆಗನುಸಾರ ಅವಳಲ್ಲಿ ಆಗುವ ಬದಲಾವಣೆಯನ್ನು ಅನುಸರಿಸಿರುತ್ತದೆ.
ಈ. *ಮಹತ್ವ:* ಈ ದಿನ ಪಂಚಾಂಗದ ನಿರಯನ ಪದ್ಧತಿಗನುಸಾರ ಸೂರ್ಯನ ಉತ್ತರಾಯಣ ಪ್ರಾರಂಭವಾಗುತ್ತದೆ.
*ಕರ್ಕಸಂಕ್ರಾಂತಿಯಿಂದ ಮಕರ ಸಂಕ್ರಾಂತಿಯ ವರೆಗಿನ ಕಾಲವನ್ನು ‘ದಕ್ಷಿಣಾಯನ’ ಎನ್ನುತ್ತಾರೆ.*
*ದಕ್ಷಿಣಾಯನ ಕಾಲದಲ್ಲಿ ಮೃತನಾದ ವ್ಯಕ್ತಿಯು, ಉತ್ತರಾಯಣದಲ್ಲಿ ಮೃತನಾದ ವ್ಯಕ್ತಿಗಿಂತ* ದಕ್ಷಿಣಲೋಕಕ್ಕೆ (ಯಮಲೋಕಕ್ಕೆ) ಹೋಗುವ ಸಾಧ್ಯತೆ ಹೆಚ್ಚಿರುತ್ತದೆ.
ಈ೧. *ಸಾಧನೆಯ ದೃಷ್ಟಿಯಿಂದ ಮಹತ್ವ:* ಈ ದಿನ ಪಂಚಾಂಗದ ನಿರಯನ ಪದ್ಧತಿಗನುಸಾರ ಸೂರ್ಯೋದಯದಿಂದ ಸೂರ್ಯಾಸ್ತದ ವರೆಗಿನ ವಾತಾವರಣವು *ಅಧಿಕ ಚೈತನ್ಯಮಯವಾಗಿರುವುದರಿಂದ ಸಾಧನೆಯನ್ನು ಮಾಡುವವರಿಗೆ ಈ ಸಮಯ ಚೈತನ್ಯದ ಲಾಭವಾಗುತ್ತದೆ.*
ಉ. *ಹಬ್ಬವನ್ನು ಆಚರಿಸುವ ಪದ್ಧತಿ*
ಉ೧. *ಮಕರಸಂಕ್ರಾಂತಿಯ ಕಾಲದಲ್ಲಿ ತೀರ್ಥಸ್ನಾನವನ್ನು ಮಾಡುವುದರಿಂದ ಮಹಾಪುಣ್ಯವು ದೊರೆಯುವುದು:**‘ಮಕರಸಂಕ್ರಾಂತಿಯ ದಿನ ಸೂರ್ಯೋದಯದಿಂದ ಸೂರ್ಯಾಸ್ತದ ವರೆಗಿನ ಕಾಲವು ಪುಣ್ಯಕಾಲವಾಗಿರುತ್ತದೆ. ಈ ಕಾಲದಲ್ಲಿ ತೀರ್ಥಸ್ನಾನಕ್ಕೆ ವಿಶೇಷ ಮಹತ್ವವಿದೆ. ಗಂಗಾ, ಯಮುನಾ, ಗೋದಾವರಿ, ಕೃಷ್ಣಾ ಮತ್ತು ಕಾವೇರಿ ನದಿಗಳ ದಡದಲ್ಲಿರುವ ಕ್ಷೇತ್ರದಲ್ಲಿ ಸ್ನಾನ ಮಾಡಿದರೆ ಮಹಾಪುಣ್ಯವು ಲಭಿಸುತ್ತದೆ.’*
ಉ೨. *ದಾನ*
ಉ೨ಅ. *‘ಪರ್ವಕಾಲದಲ್ಲಿ ದಾನದ ಮಹತ್ವ:* ಮಕರಸಂಕ್ರಾಂತಿಯಿಂದ ರಥ ಸಪ್ತಮಿಯವರೆಗಿನ ಕಾಲವು *ಪರ್ವಕಾಲ ವಾಗಿರುತ್ತದೆ.**ಈ ಪರ್ವಕಾಲದಲ್ಲಿ ಮಾಡಿದ ದಾನ ಮತ್ತು ಪುಣ್ಯಕರ್ಮಗಳು ವಿಶೇಷ ಫಲವನ್ನು ಕೊಡುತ್ತವೆ.*
ಉ೨ಆ. *ದಾನ ಕೊಡುವ ವಸ್ತುಗಳು:*
*‘ಹೊಸಪಾತ್ರೆ, ವಸ್ತ್ರ, ಅನ್ನ, ಎಳ್ಳು, ಎಳ್ಳುಪಾತ್ರೆ, ಬೆಲ್ಲ, ಆಕಳು, ಕುದುರೆ, ಚಿನ್ನ ಅಥವಾ ಭೂಮಿಯನ್ನು ಯಥಾಶಕ್ತಿ ದಾನ ಮಾಡಬೇಕು. ಈ ದಿನ ಮುತ್ತೈದೆಯರು ದಾನ ಮಾಡುತ್ತಾರೆ. ಮುತ್ತೈದೆಯರು ಕೆಲವು ಪದಾರ್ಥಗಳನ್ನು ಕುಮಾರಿಯರಿಂದ ದೋಚುತ್ತಾರೆ (ಅಪಹರಿಸುತ್ತಾರೆ) ಮತ್ತು ಅವರಿಗೆ ಎಳ್ಳುಬೆಲ್ಲ ಕೊಡುತ್ತಾರೆ.’*ಉ೨ಆ೧. *ಬಾಗಿನ ನೀಡುವುದರ ಮಹತ್ವ:*
*‘ಬಾಗಿನ ನೀಡುವುದೆಂದರೆ’* ಇನ್ನೊಂದು ಜೀವದಲ್ಲಿನ ದೇವತ್ವಕ್ಕೆ ತನು, ಮನ ಮತ್ತು ಧನದಿಂದ ಶರಣಾಗುವುದು.ಸಂಕ್ರಾಂತಿಯ ಕಾಲವು ಸಾಧನೆಗೆ ಪೂರಕವಾಗಿರುವುದರಿಂದ ಈ ಕಾಲದಲ್ಲಿ ನೀಡಿದ ಬಾಗಿನದಿಂದ *ದೇವತೆಯ ಕೃಪೆಯಾಗಿ ಜೀವಕ್ಕೆ ಇಚ್ಛಿತ ಫಲಪ್ರಾಪ್ತಿಯಾಗುತ್ತದೆ.*
ಉ೨ಆ೨. *ಬಾಗಿನವೆಂದು ಯಾವ ವಸ್ತುಗಳನ್ನು ಕೊಡಬೇಕು?:* ಇತ್ತೀಚೆಗೆ ಸಾಬೂನು, ಪ್ಲಾಸ್ಟಿಕ್‌ನ ವಸ್ತುಗಳಂತಹ ನಿರುಪಯುಕ್ತ ವಸ್ತುಗಳನ್ನು ಬಾಗಿನ ವೆಂದು ಕೊಡುವ *ಅಯೋಗ್ಯ ಪದ್ಧತಿಯು ರೂಢಿಯಲ್ಲಿದೆ.*
ಈ ವಸ್ತುಗಳ ಬದಲಿಗೆ ಸೌಭಾಗ್ಯದ ವಸ್ತುಗಳು, ಊದುಬತ್ತಿ, ಉಟಣೆ, ಧಾರ್ಮಿಕಗ್ರಂಥ, ಪುರಾಣಗ್ರಂಥ, ದೇವತೆಗಳ ಚಿತ್ರ, ಅಧ್ಯಾತ್ಮದ ಬಗೆಗಿನ ಧ್ವನಿಚಿತ್ರಮುದ್ರಿಕೆ ಮುಂತಾದ *ಅಧ್ಯಾತ್ಮಕ್ಕೆ ಪೂರಕವಾಗಿರುವ ವಸ್ತುಗಳನ್ನು* ಕೊಡಬೇಕು.
*ಕೃಪೆ :Whatsapp*
*ಲೇಕಕರಿಗೆ ನನ್ನ ಅನಂತ ನಮನಗಳು*🙏🙏🙏🙏