*ಶ್ರೀ ಯೋಗಿ ನಾರಾಯಣಾಚಾರ್ಯರು*

6 0 0
                                    

|| *ಶ್ರೀಮನ್ಮೂಲರಾಮೋ ವಿಜಯತೇ* ||
|| *ಶ್ರೀಗುರುರಾಜೋ ವಿಜಯತೇ*||
|| *ಶ್ರೀ ಇಭರಾಮಪುರಾಧೀಯ ನಮಃ* ||

*ಶ್ರೀ ಯೋಗಿ ನಾರಾಯಣಾಚಾರ್ಯರು*

ವೀರನಾರಾಯಣಕೃಪಾಪಾತ್ರಂ ಕೃಷ್ಣಾರ್ಯಗುರುಸೇವಕಮ್ |
ಜ್ಞಾನವೈರಾಗ್ಯಸಂಪನ್ನಂ ಯೋಗೀನಾರಾಯಣಗುರುಂ ಭಜೇ ||

ಶ್ರೀ ಯೋಗಿ ನಾರಾಯಣಾಚಾರ್ಯರು ಕಲಿಯುಗ ಕಲ್ಪವೃಕ್ಷ ಕಾಮಧೇನು ಶ್ರೀರಾಘವೇಂದ್ರ ಗುರುಸಾರ್ವಭೌಮರ ವಿಶೇಷ ಕರುಣಾಸುಪಾತ್ರರು 
ಹಾಗೂ ಶ್ರೀ ಅಪ್ಪಾವರು ಸಾಕ್ಷಾತ್ ಶಿಷ್ಯರು.

ಶ್ರೀಯೋಗಿ ನಾರಾಯಣಾಚಾರ್ಯರು ವಿದ್ಯಾಸಂಪನ್ನರಾದ ಶ್ರೀ ಉಪಾಧ್ಯಾಯ ರಾಮಚಾರ್ಯರಲ್ಲಿ ಸಕಲ ವೇದಾಂತ ಶಾಸ್ತ್ರವನ್ನು ಅಧ್ಯಯನ ಮಾಡಿದರು. 

ಶ್ರೀ ನಾರಾಯಣಾಚಾರ್ಯರು ಮೂಲತಃ ಗದುಗಿನವರು. ಆಚಾರ್ಯರು ಗದಗ್ ವೀರ ನಾರಾಯಣನ ಅಂತರಂಗ ಭಕ್ತರು. ತಮ್ಮ ಸ್ವರೂಪೊದ್ದಾರಕ ಗುರುಗಳ  ಪ್ರಾಪ್ತಿಗಾಗಿ ನಿತ್ಯವೂ ಶ್ರೀ ನಾರಾಯಣಾಚಾರ್ಯರು ವೀರ ನಾರಾಯಣನ ಸೇವೆ ಮಾಡುತಿದ್ದರು.

*ಸ್ವರೂಪೋಧಾರಕ ಗುರುಗಳ ಪ್ರಾಪ್ತಿ*

ಆಚಾರ್ಯರ ನಿಷ್ಠೆಯ ಸೇವೆಗೆ ಮೆಚ್ಚಿದ ವೀರ ನಾರಾಯಣ ದೇವರು ಸ್ವಪ್ನದಲ್ಲಿ ಆಚಾರ್ಯರಿಗೆ ನಿಮ್ಮ ಸ್ವರೂಪೊದ್ದಾರಕರು ಅತಿ ಶೀಘ್ರದಲ್ಲಿ ನಿನಗೆ ಭೇಟಿ ಆಗುತ್ತಾರೆ ಅಂತ ಸೂಚನೆ ಕೊಡುತ್ತಾನೆ.

ಶ್ರೀ ಅಪ್ಪಾವರು ಸಂಚಾರದ ಅನ್ವಯ ಗದುಗಿಗೆ ಬಂದಿರುತ್ತಾರೆ. ಅಲ್ಲಿ ಮಧ್ಯಾಹ್ನದ ಸಮಯಕೆ ಶ್ರೀ ವೀರ ನಾರಾಯಣನ ದರ್ಶನಕ್ಕೆ ಅಪ್ಪಾವರು ಬಂದರು , ಬಂದ ಸಮಯದಲ್ಲಿ ಅರ್ಚಕರು ದೇವಸ್ಥಾನ ಗರ್ಭಗುಡಿ ಬೀಗ ಹಾಕಿರುತ್ತಾರೆ. ದೇವಸ್ಥಾನದ ಪ್ರಾಂಗಣದಲ್ಲಿ ಅಪ್ಪಾವರು ವೀರ ನಾರಾಯಣನ ಪ್ರಾರ್ಥಿಸುತ್ತಾ ಸ್ವಾಮಿ ನಾನು ನಿನ್ನ ದರ್ಶನಕ್ಕಾಗಿ  ಇಭರಾಮಪುರದಿಂದ ಬಂದಿದ್ದೇನೆ ಅಂತ ಪ್ರಾರ್ಥಿಸಿದಾಗ , ದೇವಸ್ಥಾನದ ಗರ್ಭಗುಡಿಯ ಬಾಗಿಲು ತಾನಾಗಿಯೇ ತೆರೆಯುತ್ತದೆ.

ಇದೇ ಸಮಯದಲ್ಲಿ ಶ್ರೀ ಯೋಗಿ ನಾರಾಯಣಾಚಾರ್ಯರು ದೇವಸ್ಥಾನ ಪ್ರಾಂಗಣದಲ್ಲಿಯೇ ಇರುತ್ತಾರೆ. ಶ್ರೀ ಅಪ್ಪಾವರನ್ನು ಯಾರೋ ಯಾತ್ರಿಕರು ನಾರಾಯಣನ ದರ್ಶನಕ್ಕಾಗಿ ಬಂದಿದ್ದಾರೆ ಎಂದು ತಿಳಿದಿರುತ್ತಾರೆ ಆದರೆ ಅಲ್ಲಿ ನಡೆದಿದ್ದು ಬೇರೆ. ಅಪ್ಪಾವರ ಪ್ರಾರ್ಥನೆ ದೇವಸ್ಥಾನದ ಗರ್ಭಗುಡಿಯ ಬಾಗಿಲು ತಾನಾಗಿಯೇ ತೆರೆದುದನ್ನು ಕಂಡು ಆಚಾರ್ಯರು ಒಂದು ಕ್ಷಣ ಏನು ತೋಚದೆ ಬೆರಗಾಗುತ್ತಾರೆ .

ಶ್ರೀ ಅಪ್ಪಾವರು ವೀರ ನಾರಾಯಣನ ಜೊತೆ ನೇರವಾಗಿ ಸಂದರ್ಶನ ಮಾಡುವುದನ್ನು ಕಂಡು ಸ್ವಪ್ನದಲ್ಲಿ ಸೂಚಿಸಿದ ಹಾಗೆ ತಮಗೆ ಯೋಗ್ಯವಾದ ಗುರುಗಳ ಪ್ರಾಪ್ತಿಯಾಯಿತು ಎಂದು  ಶ್ರೀ ಯೋಗಿ  ನಾರಾಯಣಾಚಾರ್ಯರು ಅಪ್ಪಾವರಲ್ಲಿ ಶಿಷ್ಯ ಸ್ವೀಕಾರಕ್ಕಾಗಿ ಪ್ರಾರ್ಥನೆ ಮಾಡುತ್ತಾರೆ. ಆಚಾರ್ಯರ ಪ್ರಾರ್ಥನೆಗೆ ಶ್ರೀ ಅಪ್ಪಾವರು ಸಂತುಷ್ಟರಾಗಿ ಅವರನ್ನು ತಮ್ಮ ಶಿಷ್ಯ ರನ್ನಾಗಿ ಸ್ವೀಕರಿಸುತ್ತಾರೆ.

ದಾಸ ಸಾಹಿತ್ಯWhere stories live. Discover now